News

ವಿರೋಧ ಪಕ್ಷಗಳ ಯಾತ್ರೆಗೆ ಸೆಡ್ಡು ಹೊಡೆಯಲು ಮಾರ್ಚ್ ನಲ್ಲಿ ಹೊರಡಲಿದೆ ಕಾಂಗ್ರೆಸ್ ಯಾತ್ರೆ


ಬೆಂಗಳೂರು ಡಿ 05: ಬಿಜೆಪಿಯ ಪರಿವರ್ತನಾ ಯಾತ್ರೆ ಆಯ್ತು, ಜೆಡಿಎಸ್‌ ನ ವಿಕಾಸ ಯಾತ್ರೆಯೂ ಆಯ್ತು. ಇನ್ನು ವಿರೋದ ಪಕ್ಷಗಳ ಯಾತ್ರೆಗಳಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಮಾರ್ಚ್ 1ರಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದೆ. ಡಿ 5 ರ ಮಂಗಳವಾರ ಈ ವಿಚಾರವನ್ನು ಸ್ಪಷ್ಟಪಡಿಸಿದ್ದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷದಿಂದ ಜನಾಶೀರ್ವಾದ ಯಾತ್ರೆ ನಡೆಯಲಿದ್ದು, ಸರ್ಕಾರದ ವತಿಯಿಂದ ಸಾಧನ ಸಂಭ್ರಮ ಸಮಾವೇಶ ನಡೆಯಲಿದೆ ಎಂದು ಹೇಳಿದರು
ಇದೇ ತಿಂಗಳ 13ರಿಂದ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಧನ ಸಂಭ್ರಮ ಸಮಾವೇಶ ನಡೆಯಲಿದ್ದು, ಜಿಲ್ಲಾ ಪ್ರವಾಸ, ಕ್ಷೇತ್ರ ಪ್ರವಾಸ ಪೂರ್ಣಗೊಂಡ ಬಳಿಕ ಪಕ್ಷದ ವತಿಯಿಂದ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.