News

ಇಟಲಿಯಲ್ಲಿ ನಡೆಯಲಿರುವ ವಿರಾಟ್ ಕೊಹ್ಲಿ, ಅನುಷ್ಕಾ ವಿವಾಹದ ಡೇಟ್ ಪಿಕ್ಸ್..?


ನವ ದೆಹಲಿ,  ಡಿ 6 : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಮದುವೆ ಡೇಟ್ ಪಿಕ್ಸ್ ಆಗಿದೆ ಎಂದು ಇಟಲಿಯ ಮಾದ್ಯಮಗಳು ವರದಿ ಮಾಡಿದೆ. ಇಟಲಿಯಲ್ಲಿ ನಡುವೆಯಲಿರುವ ವಿವಾಹ ಸಮಾರಂಭಕ್ಕೆ ಈಗಾಗಲೆ ಭರದ ಸಿದ್ದತೆ ಸಾಗುತ್ತಿದ್ದು, ಆಪ್ತರು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಹಾಗೂ ಇದೇ ತಿಂಗಳ ಡಿಸೆಂಬರ್ 22 ರಂದು ವಿವಾಹ ಸಾಧ್ಯತೆ ಎಂದು ವರದಿಯ ಮಾಡಿದೆ. ಹೀಗಾಗಿ ಮುಂದಿನ ಕೆಲವು ಸರಣಿ ಪಂದ್ಯಾಟದಲ್ಲಿ ವಿರಾಟ್ ಕೊಹ್ಲಿ ಗೈರಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಕೆಲವು ಸರಣಿಯಲ್ಲಿ ತಮಗೆ ಆಡಲು ಸಾಧ್ಯವಾಗುತ್ತಿಲ್ಲ ಎಂದು ಈ ಹಿಂದೆ ಬಿಸಿಸಿಐಗೆ ಕೊಹ್ಲಿ ಮನವಿಯಲ್ಲಿ ತಿಳಿಸಿದ್ದರು. ಜನವರಿಯಿಂದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಪ್ರವಾಸ ಕೈಗೊಳ್ಳಲಿದ್ದು, ನಿರಂತರ ಕ್ರಿಕೆಟ್ ಆಡುತ್ತೀರೋ ಕೊಹ್ಲಿ ಅದಕ್ಕೂ ಮೊದಲು ಕೊಂಚ ವಿರಾಮ ಬಯಸಿದ್ದರು. ಹೀಗಾಗಿ ಡಿಸೆಂಬರ್ ನಲ್ಲಿ ಅನುಷ್ಕಾ ಜೊತೆ ಮದುವೆ ಮಾಡಲೆಂದೇ ರಜೆಗೆ ಮನವಿ ಮಾಡಿದ್ದರು ಎನ್ನುವ ಸುದ್ದಿ ಬಾಲಿವುಡ್, ಕ್ರಿಕೆಟ್ ವಲಯದಲ್ಲಿ ಹರಿದಾಡುತಿತ್ತು.