News

ಉಡುಪಿ: ಗಾಂಜಾ ಸೇವನೆ - ಇಬ್ಬರು ಯುವಕರು ಪೊಲೀಸರ ವಶ

ಉಡುಪಿ, ಜು17(Daijiworld News/SS): ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಉದ್ಯಾವರ ಬಲಾಯಿಪಾದೆಯ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಶಿರ್ವ ಸುನ್ನಿ ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಶೋಯಿಬ್(20) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಮಣ್ಣಪಳ್ಳದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪ್ರೀತಮ್ ಕೆ.(22) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.