News

ಕಾಸರಗೋಡು: ಸಿಎಎ ವಿರೋಧದ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕ ಕುಸಿದು ಬಿದ್ದು ಸಾವು

ಕಾಸರಗೋಡು, ಜ 20(DaijiworldNews/SM): ಬದಿಯಡ್ಕದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ನೀರ್ಚಾಲು ಬಿರ್ಮಿನಡ್ಕದ ಇಕ್ಬಾಲ್(28) ಮೃತಪಟ್ಟವರು. ಎಸ್ ಕೆ ಎಸ್ ಎಸ್ ಎಫ್ ನ ಸ್ವಯಂ ಸೇವಕರಾಗಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದ ಇಕ್ಬಾಲ್ ಕುಸಿದುಬಿದ್ದಿದ್ದು, ಕೂಡಲೇ ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಕಾಸರಗೋಡು ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟರು.