News

ಮುಂಬೈ: ಐಸಿಸಿ ರ್‍ಯಾಂಕಿಂಗ್-ಬ್ಯಾಟಿಂಗ್ ಬೌಲಿಂಗ್ ನಲ್ಲಿ ಭಾರತೀಯರದೇ ಪಾರಮ್ಯ

ಮುಂಬೈ, ಜ 20 (DaijiworldNews/SM): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾದ ಆಟಗಾರರು ರ್‍ಯಾಂಕಿಂಗ್ ನಲ್ಲೂ ಪಾರಾಮ್ಯ ಮೆರೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪರಿಷ್ಕೃತ ಏಕದಿನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಭಾರತೀಯ ಆಟಗಾರರಿಗೆ ಮೊದಲೆರಡು ಸ್ಥಾನ ಲಭಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನವನ್ನೇ ಕಾಯ್ದುಕೊಂಡಿದ್ದಾರೆ. ಒಟ್ಟು 886 ರೇಟಿಂಗ್ಸ್ ಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ತಮ್ಮ ಮೊದಲ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಿಕೊಂಡಿದ್ದಾರೆ. 868 ರೇಟಿಂಗ್ಸ್ ಹೊಂದಿರುವ ರೋಹಿತ್ ಶರ್ಮಾ ದ್ವಿತೀಯ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಉಳಿದಂತೆ ಪಾಕಿಸ್ತಾನದ ಸ್ಫೋಟಕ ಆಟಗಾರ ಬಾಬರ್ ಅಜಮ್ 829 ರೇಟಿಂಗ್ಸ್ ನೊಂದಿಗೆ 3ನೇ ಮತ್ತು ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್ 815 ರೇಟಿಂಗ್ಸ್ ನೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಭಾರತೀಯ ಆಟಗಾರರೇ ಪಾರಮ್ಯ ಮೆರೆದಿದ್ದಾರೆ. ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಬುಮ್ರಾ ಒಟ್ಟು 764 ರೇಟಿಂಗ್ಸ್ ಹೊಂದಿದ್ದಾರೆ.