News

ಶಾಸಕ ಸುನಿಲ್ ಕುಮಾರ್ ವಿರುದ್ದ ಕಾರ್ಕಳದಲ್ಲಿ ಬೃಹತ್ ಪ್ರತಿಭಟನಾ ಜಾಥಾ

ಕಾರ್ಕಳ ಫೆ 07 : ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕಾರ್ಕಳ ನಿಕಟಪೂರ್ವ ಶಾಸಕ ಎಚ್ ಗೋಪಾಲ್ ಭಂಡಾರಿ ಹಾಗೂ ಉದಯ್ ಶೆಟ್ಟಿ ಮುನಿಯಾಲು ಅವರ ವಿರುದ್ದ  ಅವಹೇಳನಕಾರಿಯಾಗಿ ಮಾತನಾಡಿ ನಿಂದಿಸಿದ ಶಾಸಕ ಸುನಿಲ್ ಕುಮಾರ್  ಅವರ ವಿರುದ್ದ  ಕಾರ್ಕಳದಲ್ಲಿ ಫೆ.07ರ ಬುಧವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮೊದಲು ಕಾರ್ಕಳ ಅನಂತಶಯನ ದೇವಸ್ಥಾನದಿಂದ ಬಂಡೀ ಮಠ ದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಯುವ ಕಾಂಗ್ರೆಸ್ ವತಿಯಿಂದ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ವೇಳೆ ಕಾಂಗ್ರೆಸ್ ಮುಖಂಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ದ  ಕಾಂಗ್ರೆಸ್ ಕಾರ್ಯಕರ್ತರು ದಿಕ್ಕಾರದ ಕೂಗು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ರು. ಉಡುಪಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಾರ್ಕಳ ಯುವ ಕಾಂಗ್ರೆಸ್ ಅದ್ಯಕ್ಷ ದೀಪಕ್ ಕೋಟ್ಯಾನ್  ಸೇರಿದಂತೆ ಕಾಂಗ್ರೆಸ್ ಪ್ರಮುಖ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು