News

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕ ಮಧು ಬಂಗಾರಪ್ಪ

ಮಂಗಳೂರು, ಫೆ 9: ಕರಾವಳಿಯಲ್ಲಿ ಧಾರ್ಮಿಕ ಯಾತ್ರಾ ಕ್ಷೇತ್ರವಾಗಿ ಸಾಕಷ್ಟು ಪ್ರಸಿದ್ಧಿಯನ್ನು ಗಳಿಸಿದ ಇತಿಹಾಸ ಪ್ರಸಿದ್ಧ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರಕ್ಕೆ ಸೊರಬ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಭೇಟಿ ನೀಡಿದರು.

ಈ ಸಂದರ್ಭ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಕೆ. ಚಿತ್ತರಂಜನ್ ಶಾಸಕರನ್ನು ಸ್ವಾಗತಿಸಿದ್ದು, ಶ್ರೀ ಕ್ಷೇತದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಧು ಬಂಗಾರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವ್ಯವಸ್ಥಾಪಕರಾದ ಕಿಶೋರ್ ಮಜಿಲ, ಆಡಳಿತ ಮಂಡಳಿಯವರು, ಹಾಗೂ ಜೆ.ಡಿ.ಎಸ್ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ವಸಂತ್ ಪೂಜಾರಿ, ಸಂದೀಪ್ ಗರೋಡಿ , ಕೌಶಿಕ್ ಗರೋಡಿ, ವಿದೀಶ್ ಡಿ‌.ಕೆ ಮೊದಲಾದವರು ಉಪಸ್ಥಿತರಿದ್ದರು