News

ರಾಹುಲ್ ರಾಜ್ಯ ಪ್ರವಾಸದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ

ರಾಯಚೂರು ಫೆ 12: ಮೋದಿಯವರ ಸಮಾವೇಶದ ಬಳಿಕ ಕಾಂಗ್ರೆಸ್ ಕೂಡ ಭರ್ಜರಿ ಪ್ರಚಾರಕ್ಕೆ ಸಜ್ಜಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸದಲ್ಲಿದ್ದು, ಪ್ರಚಾರದ ಮೂರನೇ ದಿನ ರಾಯಚೂರಿನ ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಇಂದು ರಾಯಚೂರಿನ ಗಂಜ್ ವೃತ್ತದಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿ ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು. ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾಥ್ ನೀಡಿದ್ದಾರೆ.

ರಾಹುಲ್ ಗಾಂಧಿ ವಿಶೇಷ ಬಸ್ ನಲ್ಲಿ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದು, ಟಿಪ್ಪು ಸುಲ್ತಾನ್ ವೃತ್ತದಲ್ಲಿ ರಾಹುಲ್ ಬಸ್ ಗೆ ಪುಷ್ಪವೃಷ್ಟಿ ಹಾಕಿದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ತಾಮ್ರದ ಗಧೆ ನೀಡಿ ಸನ್ಮಾನಿಸಿದರು.