News

ಸಿದ್ದರಾಮಯ್ಯ ಸರ್ಕಾರದಿಂದ ಪ್ರಧಾನಿ ಮೋದಿ ಪಾಠ ಕಲಿಯಲಿ – ರಾಹುಲ್

ರಾಯಚೂರು, ಫೆ 12: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಪರ, ಬಡವರ ಪರ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ  ಅವರಿಂದ ಪಾಠ ಕಲಿಯಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಜನಾಶೀರ್ವಾದ ಯಾತ್ರೆಗಾಗಿ ಆಯೋಜಿಸಿದ್ದ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ. ಒಂದು ವೇಳೆ ಬಡವರ ಪರವಾಗಿದ್ದರೆ ಬಿಜೆಪಿ  ಹಸಿದವರಿಗಾಗಿ ದೇಶದ ತುಂಬ ಇಂದಿರಾ ಕ್ಯಾಂಟಿನ್ ಆರಂಭಿಸಬೇಕು ಎಂದು ಸವಾಲು ಹಾಕಿದರು. 

ಕರ್ನಾಟಕದಲ್ಲಿ  ಉದ್ಯೋಗ ಸೃಷ್ಟಿ ಮಾಡಿದ್ದಾರೆ. ಆದರೆ ಮೋದಿ ದೇಶದಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಕೊಡುವ ಮಾತಿನಂತೆ ನಡೆದುಕೊಂಡಿಲ್ಲ. ಪರಿಶಿಷ್ಟರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ 27,700 ಕೋಟಿ ಅನುದಾನ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಇಡೀ ದೇಶಕ್ಕೆ 54 ಸಾವಿರ ಕೋಟಿ ನೀಡಿದೆ. ಕೇಂದ್ರದ ಒಟ್ಟು ಅನುದಾನದಲ್ಲಿ ಶೇ 50ರಷ್ಟು ಕರ್ನಾಟಕ ಒಂದೇ ರಾಜ್ಯ ನೀಡಿದೆ ಎಂದು ಹೇಳಿದರು.