News

ಹಾದಿಯಾ ವಿವಾಹ ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ - ಸುಪ್ರಿಂ ಕೋರ್ಟ್ ತಡೆ

ಮಾ .08: ದೇಶದಾದ್ಯಂತ ತೀವ್ರ ಚರ್ಚೆಗೆ ಒಳಗಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀನ್ ಜಹಾನ್ ಜೊತೆಗಿನ ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಶಫೀನ್ ಜಹಾನ್ ಜತೆಗಿನ ವಿವಾಹವನ್ನು ರದ್ದು ಗೊಳಿಸಿದ ಆದೇಶವನ್ನು ಪ್ರಶ್ನಿಸಿ ಹಾದಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಳು. ವಿಚಾರಣೆಯನ್ನು ಕೈಗೆತ್ತಿಗೊಂಡಿರುವ, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ಡಿವೈ. ಚಂದ್ರಚೂಡ್ ಅವರಿದ್ದ ಪೀಠ, ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.