News

ಲೋಕಾಯುಕ್ತರಿಗೆ ಚೂರಿ ಇರಿತ ಪ್ರಕರಣ- ಡಿಸಿಪಿ ಯೋಗೇಶ್ ಸಸ್ಪೆಂಡ್

ಬೆಂಗಳೂರು, ಮಾ 09: ಲೋಕಾಯುಕ್ತ ನ್ಯಾ| ಪಿ. ವಿಶ್ವನಾಥ್‌ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸರ್ಕಾರ ವಿಧಾನಸೌಧ ಭದ್ರತಾ ವಿಭಾಗದ, ಡಿಸಿಪಿ ಯೋಗೇಶ್ ಅವರನ್ನು ಅಮಾನತುಗೊಳಿಸಿದೆ. ಈ ದಾಳಿಗೆ ಭದ್ರತಾ ಲೋಪವೇ ಕಾರಣ ಎಂದು ಪೊಲೀಸ್ ಆಯುಕ್ತ ಟಿ. ಸುನೀಲ್‌ ಕುಮಾರ್ ನೀಡಿದ ವರದಿಯ ಆಧಾರದ ಮೇಲೆ ಗುರುವಾರ ಅಮಾನತು ಮಾಡುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಆದೇಶಿಸಿದ್ದಾರೆ.
ಅತ್ತ ಕಡೆ ತೇಜ್ ರಾಜ್ ಶರ್ಮಾ ನಿಂದ ಚೂರಿ ಇರಿತಕ್ಕೆ ಒಳಗಾದ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಸದ್ಯ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.