News

ಮಂಗಳೂರು : ಮಹಿಳಾ ಕಾರ್ಪೋರೇಟರ್ ಗೆ ಕಿರುಕುಳ- ಹುದ್ದೆಯಿಂದ ಸತ್ತಾರ್ ಔಟ್- ಸುಳ್ಳು ಸುದ್ದಿ ಎಂದು ಸತ್ತಾರ್ ದೂರು

 

ಮಂಗಳೂರು ಮಾರ್ಚ್ 13: ಮಂಗಳೂರು ಮಹಾನಗರಪಾಲಿಕೆಯ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಅವರನ್ನು ಹುದ್ದೆಯಿಂದ ವಜಗೊಳಿಸಲಾಗಿದೆ. ಕಾರ್ಪೋರೇಟರ್ ಜತೆ ಸುರತ್ಕಲ್ ನಲ್ಲಿ ಅಬ್ದುಲ್ ಸತ್ತಾರ್ ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ಸತ್ತಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಮಾ. ೧೩ ರ ಮಂಗಳವಾರ ಪತ್ರಿಕಾ ಪ್ರಕಟನೆ ನೀಡಿದ್ದಾರೆ

ಈ ನಡುವೆ , ತಮ್ಮ ವಿರುದ್ದ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಾಗಿ ಆರೋಪಿಸಿ ಆನ್ ಲೈನ್ ಮಾಧ್ಯಮವೊಂದರ ವಿರುದ್ದ, ಸತ್ತಾರ್ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ