News

ಆಧಾರ್ ಜೋಡಣೆಗೆ ಮತ್ತಷ್ಟು ಕಾಲಾವಕಾಶ

ಮಾ,11 : ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಸಂಖ್ಯೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಅವಧಿಯನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಠಾವಧಿಗೆ ಮುಂದೂಡಿ ಮಂಗಳವಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಈ ಹಿಂದೆ ಮಾ.31ರ ಅಂತಿಮ ಕಾಲ ಮಿತಿಯನ್ನು ವಿಧಿಸಲಾಗಿತ್ತು.


ಆಧಾರ್ ಗುರುತು ಚೀಟಿಯ ಸಾಂವಿಧಾನಿಕ ಸಿಂಧುತ್ವದ ಕುರಿತಂತೆ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡುವವರೆಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯಲ್ಲ ಎಂದು ಹೇಳಿ ಕಾಲಮಿತಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರಿದ್ದ ಸಾಂವಿಧಾನಿಕ ಪೀಠವು ಅನಿರ್ದಿಷ್ಠಾವಧಿಗೆ ಮುಂದೂಡಿದೆ.