News

ಮಂಗಳೂರು: ಕೆಪಿಸಿಸಿ ಸಾಮಾಜಿಕ ಜಾಲತಾಣದ ದ.ಕ ಜಿಲ್ಲಾ ಸಮಿತಿ ಸದಸ್ಯರಾಗಿ ಡಾ.ಹಾರಿಸ್ ದುಬೈ ಆಯ್ಕೆ

ಮಂಗಳೂರು ಏ.10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಜಾಲಾತಾಣ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾಗಿ ಎನ್ನಾರೈ ಸಾಮಾಜಿಕ ಮುಖಂಡ ಡಾ.ಅಬ್ದುಲ್ ಹಾರಿಸ್ ದುಬೈ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಘಟಕ ರಾಜ್ಯ ಉಸ್ತುವಾರಿ ಶ್ರೀವತ್ಸ, ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಉಸ್ತುವಾರಿ ರಮ್ಯಾ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಬಿ ರಮಾನಾಥ ರೈ ಇವರ ಆದೇಶ ಮೇರೆಗೆ ಆಯ್ಕೆ ಮಾಡಲಾಗಿದೆ.