News

ಬೆಳ್ತಂಗಡಿ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್

ಬೆಳ್ತಂಗಡಿ, ಏ 11: ಜಾತಿ ನಿಂದನೆ ಮಾಡಿದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಕೈರಂಗಳದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ದೈವ ನರ್ತನೆಯಲ್ಲಿ ತೊಡಗಿಕೊಂಡಿರುವ ನಲಿಕೆಸಮುದಾಯದ ಸಮಾಜ ಸೇವಾ ಸಂಘದವರು ಪ್ರಭಾಕರ್‌ ಭಟ್‌ ವಿರುದ್ಧ ದೂರು ದಾಖಲಿಸಿದ್ದಾರೆ ಶಾಂತಿಕೋಡಿ ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ ಪ್ರಭಾಕರ ಶಾಂತಿಕೋಡಿಯವರು ದೂರು ನೀಡಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.