News

ಕಾಪು: ಬಿಜೆಪಿ ಮತ್ತು ಜೆಡಿಎಸ್ ನ 50 ಕ್ಕೂ ಹೆಚ್ಚು ರಾಜ್ಯ ಜಿಲ್ಲಾ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ

ಕಾಪು, ಏ 12: ಬಿಜೆಪಿ ಮತ್ತು ಜೆಡಿಎಸ್ ನ ಉಚ್ಚಿಲ ಭಾಗದ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.

ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ, ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್ ನೇತ್ರತ್ವದಲ್ಲಿ ಶಾಬಾನ್ ಉಚ್ಛಿಲ, ಗುರುಪ್ರಸಾದ್ ಭಟ್ ಉಚ್ಛಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.  ಬಿಜೆಪಿ ಮತ್ತು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ ಜಾತ್ಯಾತೀತ ನಿಲುವು ಹೊಂದಿದ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ವನ್ನು ನೀಡುವ ಭರವಸೆ ನೀಡಿದರು. 
ಕೆಪಿಸಿಸಿ ಕಾರ್ಯದರ್ಶಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಲೋಕೇಶ್ ಅಂಚನ್, ರಫೀಕ್, ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.