News

ಹರ್ಷೋದ್ಗಾರದ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬೆಳ್ತಂಗಡಿ, ಏ 23: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಇಂದು ನಾಮಪತ್ರ ಸಲ್ಲಿಸಿದರು.

ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮ ಪತ್ರಗಳನ್ನು ಸಲ್ಲಿಸುವ ಕಾರ್ಯ ಬಿರುಸಿನಿಂದ ಸಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಹರೀಶ್ ಪೂಂಜಾ ನಾಮ ಪತ್ರ ಸಲ್ಲಿಸುವ ವೇಳೆ ಅಪಾರ ಸಂಖ್ಯೆಯಲ್ಲಿ ಜನ ಸಾಗರವೇ ಹರಿದು ಬಂದಿತ್ತು. ಹರ್ಷೋದ್ಗಾರದ ಜನಸ್ತೋಮದ ನಡುವೆ ಪಾದಯಾತ್ರೆಯ ಮೂಲಕ ಮಿನಿ ವಿಧಾನಸೌಧದವರೆಗೆ ತೆರಳಿದ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿದ್ದಾರೆ.

ಬೆಳ್ತಂಗಡಿಯಿಂದ ಈಗಾಗಲೇ ಟಿಕೆಟ್ ಪಡೆದಿರುವ ಹರೀಶ್ ಪೂಂಜಾ ಬಿಜೆಪಿಯ ಹೊಸಮುಖ. ಹರೀಶ್ ಪೂಂಜಾ ಕ್ಷೇತ್ರದೊಂದಿಗೆ ಹೆಚ್ಚಿನ ಒಡನಾಟವಿಟ್ಟುಕೊಂಡು ದುಡಿದವರು. ಹರೀಶ್ ಪೂಂಜಾ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.