News

ಕೃಷ್ಣ ನಗರಿಯ ಐದು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

ಉಡುಪಿ,ಮೇ 15: ಕೃಷ್ಣ ನಗರಿ ಉಡುಪಿಯಲ್ಲಿ ,ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್‌. ಮೆಂಡನ್‌ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಗೆಲುವು ಪಡೆದಿದ್ದಾರೆ. ಹಾಲಾಡಿ ಶ್ರೀನಿವಾಸ್ ಸುಮಾರು 1 ಲಕ್ಷ ಮತಗಳ ಅಂತರದಲ್ಲಿ ಜೈಭೇರಿ ಬಾರಿಸುವುದರ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲುಣಿಸಿದ್ದಾರೆ. ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ದ ರಘುಪತಿ ಭಟ್ ಗೆಲುವಿನ ನಗೆ ಬೀರಿದ್ದು , ಕಾರ್ಕಳದಲ್ಲಿ ಸುನೀಲ್ ಕುಮಾರ್ , ಬೈಂದೂರಿನಲ್ಲಿ ಸುಕುಮಾರ್ ಶೆಟ್ಟಿ ಜಯದ ಮಾಲೆ ಧರಿಸಿದ್ದಾರೆ.