News

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ ಸ್ಪೋಟ- ಕಣ್ಣೀರು ಹಾಕಿದ ಮಾಜಿ ಸಿಎಂ

ಬೆಂಗಳೂರು, ಮೇ 16: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ದ ಕೆಲ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಅವರು ನೇರ ಕಾರಣ ಎಂದು ಆರೋಪಿಸಿದ್ದಾರೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಏಕ ಪಕ್ಷೀಯ ನಿರ್ಧಾರ, ಹಾಗೂ ರಾಜ್ಯದಲ್ಲಿ ಹಿಂದುತ್ವದ ಅಲೆ ಇದ್ದರೂ, ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಮಾತುಗಳು, ಸೋಲಿಗೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ . ಈ ಆರೋಪಗಳಿಂದ ನೊಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಲ ಬೆಂಬಲಿಗರು ಶಾಸಕಾಂಗ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಬಗ್ಗೆ ವರದಿಯಾಗಿದೆ. 

 

ಸ್ಥಿರ ಸರ್ಕಾರ, ಜನಪರ ಆಡಳಿತ ನೀಡಿದ ಹೊರತಾಗಿಯೂ ಬಹುಮತ ಪಡೆಯಲು ವಿಫ‌ಲವಾಗಿರುವ ಬಗ್ಗೆ ನನಗೆ ನೋವಿದೆ. ಆದರೆ ಈಗ ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.