News

ರಾಜ್ಯಪಾಲರ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಹಿರಿಯ ವಕೀಲ ರಾಮ್ ಜೇಠ್ಮಲಾನಿ ವಾದ

ಮೇ 18 : ಕರ್ನಾಟಕದಲ್ಲಿ ಬಿಜೆಪಿ ಪಕ್ಷಕ್ಕೆ ಸರ್ಕಾರದ ರಚಿಸುವ ಅವಕಾಶ ನೀಡಿರುವ ರಾಜ್ಯಪಾಲರ ಆದೇಶದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. 

ಸಾಂವಿಧಾನಿಕ ಅಧಿಕಾರವನ್ನು ರಾಜ್ಯಪಾಲರು ದುರುಪಯೋಗ ಪಡಿಸಿಕೊಂಡಿದ್ದಾರೆ ಇದರಿಂದಾಗಿ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ರಾಮ್ ಜೇಠ್ಮಾಲಾನಿ ತುರ್ತು ಅರ್ಜಿ ವಿಚಾರಣೆಗೆ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಒಪ್ಪಿಗೆ ಸೂಚಿಸಿದ್ದು, ಮೇ 18 ರ ಬೆಳಿಗ್ಗೆ 10-30ಕ್ಕೆ ನ್ಯಾಯಾಧೀಶ ಎ. ಕೆ. ಸಿಕ್ರಿ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ವಿಶೇಷ ನ್ಯಾಯಪೀಠದ ಮುಂದೆ ತನ್ನ ವಾದ ಮಂಡಿಸುವಂತೆ ರಾಮ್ ಜೇಠ್ಮಲಾನಿ ಅವರಿಗೆ ಹೇಳಿದೆ. ಇದೇ ವೇಳೆ ಜೇಠ್ಮಲಾನಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ತಾನೂ ಅರ್ಜಿ ಸಲ್ಲಿಸಿಲ್ಲ, ರಾಜ್ಯಪಾಲರ ನಿರ್ಧಾರ ಅಸಂವಿಧಾನಿಕವಾಗಿದ್ದೂ ಈ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.