News

ಕುಂದಾಪುರ : ಕುಮಾರಪದಗ್ರಹಣ - ಬಿಜೆಪಿಯಿಂದ ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ

ಬೆಂಗಳೂರು, ಮೇ 23 : ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ, ಬಿಜೆಪಿ ಇಂದು ರಾಜ್ಯಾದ್ಯಂತ ಕರಾಳ ದಿನವನ್ನಾಗಿ ಆಚರಿಸುತ್ತಿದ್ದು, ಕುಂದಾಫುರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಜೆಡಿಎಸ್ ಹಾಗೂ ಕಾಂಗ್ರೆಸ್ ನಡೆಸಿರೋದು ಅಪವಿತ್ರ ಮೈತ್ರಿಯಾಗಿದೆ. ಜನರೆ ಇದಕ್ಕೆ ಮುಂದಿನ ದಿನಗಳಲ್ಲಿ ಉತ್ತರಿಸಲಿದ್ದಾರೆ. ಈ ಮೈತ್ರಿ ಹೆಚ್ಚು ಕಾಲ ಉಳಿಯೋದು ಅಸಾಧ್ಯ ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ದ ತಮ್ಮ ಆಕ್ರೋಶ ಹೊರ ಹಾಕಿದರು.

ಕಾಪು ಕ್ಷೇತ್ರದ ಬಿಜೆಪಿ ವತಿಯಿಂದ ಕಾಪು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೇ, ನೂರಕ್ಕಿಂತಲೂ ಹೆಚ್ಚು ವಿಧಾನ ಸಭಾ ಕ್ಷೇತ್ರದಲ್ಲಿ ಠೇವಣಿ ಕಳಕೊಂಡ ಜೆಡಿಎಸ್ ಪಕ್ಷದ ನಾಯಕ ಕುಮಾರಸ್ವಾಮಿಯವರು ರಾಜ್ಯ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಇವರೊಂದಿಗೆ ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಯಾವುದೇ ಕಾರಣಕ್ಕೂ ಭಾರತೀಯ ಜನತಾ ಪಕ್ಷ ಆಡಳಿತ ಮಾಡಬಾರದೆಂಬ ನೆಲೆಯಲ್ಲಿ ಬೆಂಬಲ ಕೊಡುತಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಕರ್ನಾಟಕ ಜನತೆಗೆ ಮಾಡುವ ಮೋಸ ಹಾಗೂ ಅನ್ಯಾಯ ಮಾಡುತ್ತಿದ್ದಾರೆ . ಕಾಂಗ್ರೇಸ್ ನವರಿಗೆ ಮತ್ತೆ ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಕನಿಷ್ಟ ಹದಿನೈದು ವರ್ಷ ಅವರನ್ನು ಅಲುಗಾಡಿಸಲು ಅಸಾಧ್ಯ ಎಂಬ ಹೆದರಿಕೆ ಇದೆ ಇದಕ್ಕಾಗಿ ಮೈತ್ರಿಗೆ ಮುಂದಾಗಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.