News

ಮತ್ತೆ ಮುಂದುವರೆದ ವರುಣನ ಆರ್ಭಟ – ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಬೆಳ್ತಂಗಡಿ, ಜು20: ಕರಾವಳಿಯಲ್ಲಿ ನಿನ್ನೆ ರಾತ್ರಿಯಿಂದ ಮಹಾಮಳೆ ಮತ್ತೆ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲು ತಹಶೀಲ್ದಾರ್ ಮದನ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಭಾರೀ ಸುರಿದಿದ್ದು, ಇಂದು ಕೂಡಾ ಇದು ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯಲ್ಲಿ ಇಂದು ಮುಂಜಾನೆಯಿಂದಲೇ ವರುಣ ತನ್ನ ಆರ್ಭಟವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.