News

ಬೆಂಗಳೂರು: ರಾಮನಗರ ವಿಧಾನಸಭೆ ಉಪ ಚುನಾವಣೆಗೆ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು, ಅ 10(SM): ರಾಮನಗರ ವಿಧಾನಸಭಾ ಚುನಾವಣೆಗೆ ನಡೆಯಲಿರುವ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದ್ದು, ಅನಿತಾ ಕುಮಾರಸ್ವಾಮಿಯವರನ್ನು ಆಯ್ಕೆ ಮಾಡಲಾಗಿದೆ.



ಇಂದು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಅನಿತಾ ಕುಮಾರ ಸ್ವಾಮಿ ಹೆಸರನ್ನು ಅಂತಿಮಗೊಳಿಸಲಾಗಿದೆ. ರಾಜ್ಯ ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ರಾಮನಗರ ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ವರಿಷ್ಠಾ ದೇವೇ ಗೌಡ ಘೋಷಣೆ ಮಾಡಿದ್ದಾರೆ.

ಇನ್ನು ನವೆಂಬರ್ ೩ರಂದು ರಾಮನಗರ ವಿಧಾನಸಭೆಗೆ ಉಪ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆ ಅಭ್ಯರ್ಥಿ ಪರ ಮತಯಾಚನೆ ಮಾಡುವಂತೆ ದೇವೇ ಗೌಡ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಜತೆಗೆ ಹೊಂದಿಕೊಂಡು ಹೋಗುವಂತೆ ಕಾರ್ಯಕರ್ತರಿಗೆ ಜೆಡಿಎಸ್ ವರಿಷ್ಠ ದೇವೇಗೌಡ ಸೂಚಿದ್ದಾರೆ ಎಂದು ತಿಳಿದು ಬಂದಿದೆ.