News

ಕಡಬ: ಸಾಲಬಾಧೆಯಿಂದ ನೊಂದ ರೈತ ಆತ್ಮಹತ್ಯೆ

ಕಡಬ, ಅ 10(SM): ಸಾಲ ಬಾಧೆಯಿಂದ ಬೇಸತ್ತ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲ ಗ್ರಾಮದ ಕೊಲ್ಯ ನಿವಾಸಿ ದಿ| ಸೋಮಪ್ಪ ಗೌಡ ಎಂಬವರ ಪುತ್ರ ಕುಶಾಲಪ್ಪ ಗೌಡ(53) ಎಂದು ಗುರುತಿಸಲಾಗಿದೆ.


ಕುಶಾಲಪ್ಪ ಗೌಡ, ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಬ್ಯಾಂಕ್ ಹಾಗೂ ಕೈ ಸಾಲವನ್ನು ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಇದರಿಂದಾಗಿ ಕುಶಾಲಪ್ಪ ಮನನೊಂದುಕೊಂಡಿದ್ದರು ಎನ್ನಲಾಗಿದೆ. ಬುಧವಾರದಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಪಕ್ಕದ ಕೊಠಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.