News

ಗ್ಯಾಸ್ ಟ್ಯಾಂಕರ್ ಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ, ಇಬ್ಬರಿಗೆ ಗಾಯ

ಮಂಗಳೂರು, ಡಿ 04(SM): ಗ್ಯಾಸ್ ಟ್ಯಾಂಕರ್ ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತವೊಂದರಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ಹೊರ ವಲಯದ ಕಣ್ಣೂರಿನಲ್ಲಿ ನಡೆದಿದೆ.

ಬಿ.ಸಿ. ರೋಡು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಲಿ ಟ್ಯಾಂಕರ್ ಗೆ ಧರ್ಮಸ್ಥಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಹೆದ್ದಾರಿ ಪಕ್ಕದಲ್ಲಿದ್ದ ಸ್ಕೂಲ್ ಬಸ್ ಏಕಾಏಕಿ ತಿರುಗಿದ ಪರಿಣಾಮ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದಾರೆ. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಸರಕಾರಿ ಬಸ್ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.