News

ಕಾಸರಗೋಡು: ಫೇಸ್ ಬುಕ್ ನಲ್ಲಿ ಪರಿಚಯವಾದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಕಾಸರಗೋಡು, ಡಿ 05 (MSP): ತಳಿಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಣ್ಣೂರು ಪರಶಿನಕಡವಿನ ವಸತಿ ಗೃಹವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಕಣ್ಣೂರು ನಗರದ ಶಾಲೆಯೊಂದರಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಫೇಸ್ ಬುಕ್ ಮೂಲಕ ಯುವಕನೊಬ್ಬನ ಪರಿಚಯವಾಗಿತ್ತು. ಆತ ಬಾಲಕಿಯನ್ನು ವಸತಿ ಗೃಹಕ್ಕೆ ಕರೆಸಿಕೊಂಡಿದ್ದು, ಅಲ್ಲಿ ಇತರ ಮೂವರೊಂದಿಗೆ ಸತತ ಎರಡು ದಿನಗಳ ಕಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.

ಸಂತ್ರಸ್ತ ಬಾಲಕಿಯ ಸ್ನೇಹಿತೆ ಮೂಲಕ ಮಾಹಿತಿ ಪೊಲೀಸರಿಗೆ ತಲುಪಿತ್ತು. ಅದರಂತೆ ಮಹಿಳಾ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಕಳೆದ ತಿಂಗಳು ಈ ಘಟನೆ ನಡೆದಿದೆ ಎನ್ನಲಾಗಿದೆ. ತಳಿಪರಂಬ ಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.