News

ಸೆಂಟ್ರಲ್ ಮಾರುಕಟ್ಟೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ, ೨ ಮಳಿಗೆಗಳು ಬೆಂಕಿಗಾಹುತಿ

ಮಂಗಳೂರು, ಡಿ 06(SM): ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ನಡೆದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವ ಘಟನೆ ಸೆಂಟ್ರಲ್ ಮಾರುಕಟ್ಟೆಯಲ್ಲಿ ನಡೆದಿದೆ. ಕೇಂದ್ರ ಮಾರುಕಟ್ಟೆಯಲ್ಲಿನ ಎರಡು ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ತಗುಲಿದ ಮರು ಕ್ಷಣವೇ ಭಾರೀ ಹೊಗೆ ಆವರಿಸಿತ್ತು. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳಿಗೆ ಮಾಹಿತಿ ರವಾನಿಸಲಾಗಿದೆ. ನಗರದ ಪಾಂಡೇಶ್ವರ ಹಾಗೂ ಕದ್ರಿ ಠಾಣೆಯ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಇನ್ನು ಘಟನೆಯಲ್ಲಿ ಮಳಿಗೆಯಲ್ಲಿದ್ದಂತಹ ಹಲವು ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಹಾಗೂ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.