News

ಮಂಗಳೂರು: ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಕೋಮಾ ಸ್ಥಿತಿಯಲ್ಲಿ

ಮಂಗಳೂರು, ಡಿ 06 (MSP): ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ . ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿ ಇದ್ದಾರೆ ಎನ್ನುವ ಮಾಹಿತಿ ದೊರಕಿದೆ. 


ಧನಂಜಯ ಕುಮಾರ್‌ ಅವರಿಗೆ 67 ವರ್ಷ ವಯಸ್ಸಾಗಿದ್ದು, ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತೀವ್ರ ಅಸ್ವಸ್ಥ ರಾದ ಅವರನ್ನು ನಾಲ್ಕು ತಿಂಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ಕೋಮಾ ಸ್ಥಿತಿಗೆ ಜಾರಿದ ಅವರು ನಾಲ್ಕು ತಿಂಗಳು ಕಳೆದರೂ ಅದೇ ಸ್ಥಿತಿಯಲ್ಲಿ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯಕುಮಾರ್‌, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು .ಆದರೆ, ನಂತರ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸಾದರೂ ಧನಂಜಯ ಅವರನ್ನು ವಾಪಸ್‌ ಕರೆದುಕೊಳ್ಳಲು ಬಿಜೆಪಿ ವರಿಷ್ಠರು ನಿರಾಕರಿಸಿದರು ಹೀಗಾಗಿ ಅವರು ಕಾಂಗ್ರೆಸ್‌ ಸೇರಿದ್ದರು. ಇವರು 1983 ರಲ್ಲಿ ರಾಜಕೀಯ ಜೀವನ ಪ್ರವೇಶಿಸಿದ್ದರು.