News

ಕುಂದಾಪುರ: ಬಾವಿ ಕುಸಿದು ಬಿದ್ದು ಕಾರ್ಮಿಕ ದಾರುಣ ಸಾವು, ಮೂವರಿಗೆ ಗಾಯ

ಕುಂದಾಪುರ, ಡಿ 06(SM): ಬಾವಿ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮೊಗವೀರ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದೆ.

ಬಾವಿಯ ಕೆಲಸದಲ್ಲಿ ನಿರತರಾಗಿದ್ದ ವೇಳೆ ಬಾವಿ ಕುಸಿದ ಪರಿಣಾಮ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಲಾಗಿದೆ. ಆದರೆ, ಗೋಪಾಲ ಮೊಗವೀರ ಅವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.

ಗೋಪಾಲ ಮೊಗವೀರ ನಿನ್ನೆಯಷ್ಟೆ ಅಯ್ಯಪ್ಪ ಮಾಲೆ ಧರಿಸಿದ್ದರು ಎಂದು ತಿಳಿದುಬಂದಿದೆ. ರಕ್ಷಣೆಗೊಳಪಟ್ಟ ಮೂವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗೊಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿದ್ದಾರೆ.