News

ಕಾಂಗ್ರೆಸ್​ ಅಧಿಕಾರ ವಹಿಸಿಕೊಂಡ 3 ರಾಜ್ಯಗಳಲ್ಲಿ ಶೀಘ್ರ ರೈತರ ಸಾಲ ಮನ್ನಾ ಮಾಡುತ್ತೇನೆ - ರಾಹುಲ್

ನವದೆಹಲಿ, ಡಿ15(SS): ಕಾಂಗ್ರೆಸ್​ ಪಕ್ಷವು ಅಧಿಕಾರ ವಹಿಸಿಕೊಂಡ 3 ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ ಭರವಸೆ ನೀಡಿದ್ದಾರೆ.

ರಾಹುಲ್ ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಪ್ರಚಾರದ ವೇಳೆ ಭರವಸೆ ನೀಡಿದ್ದರು. ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್​ ಮತಯಾಚನೆ ಮಾಡಿತ್ತು. ಸಾಲಮನ್ನಾಕ್ಕಾಗಿ 3 ರಾಜ್ಯಗಳ ರೈತರು ಕಾಯುತ್ತಿದ್ದಾರೆ. 

ಇದೀಗ ಇದಕ್ಕೆ ಬದ್ಧರಿರುವುದಾಗಿ ಹೇಳಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ಗಾಂಧಿ, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.