News

ನವದೆಹಲಿ: ವಿಜಯ ಬ್ಯಾಂಕ್ ವಿಲೀನ ವಿಚಾರ, ವಿತ್ತ ಸಚಿವರಿಗೆ ಸಂಸದರಿಂದ ಮನವಿ ಸಲ್ಲಿಕೆ

ನವದೆಹಲಿ, ಜ 08(SM): ಲಾಭದಲ್ಲಿರುವ ವಿಜಯ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡಾ ಹಾಗೂ ದೇನಾ ಬ್ಯಾಂಕ್ ನೊಂದಿಗೆ ವಿಲೀನಕ್ಕೆ ಕೇಂದ್ರ ಸರಕಾರದ ಆದೇಶವನ್ನು ಪುನರ್ ಪರಿಶೀಲಿಸುವಂತೆ ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿತ್ತ ಸಚಿವ ಅರುಣ್ ಜೇಟ್ಲಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನು ವಿಲೀನದ ಬಳಿಕ ವಿಜಯ ಬ್ಯಾಂಕ್ ಎಂಬ ಹೆಸರನ್ನು ಉಳಿಸುವಂತೆ ಸಂಸದರ ನಿಯೋಗ ಹಣಕಾಸು ಸಚಿವರಲ್ಲಿ ಮನವಿ ಮಾಡಿಕೊಂಡಿದೆ. ಸಂಸದರ ಮನವಿಗೆ ಕೇಂದ್ರ ಸಚಿವರು ಸ್ಪಂಧಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದೆಂದು ತಿಳಿಸಿದ್ದಾರೆ.