News

ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಉಳಿಸಿಕೊಂಡ ವಿರಾಟ್

ನವದೆಹಲಿ, ಮಾ 19(SM) : ಐಸಿಸಿ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ನೂತನ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಮಾ 19ರ ಮಂಗಳವಾರ ಪ್ರಕಟವಾಗಿರುವ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಕೊಹ್ಲಿ ನಂ.1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಟೆಸ್ಟ್ ರ್ಯಾಂಕಿಂಗ್ ನಲ್ಲಿ ಒಟ್ಟು 922 ರೇಟಿಂಗ್ ಪಾಯಿಂಟ್ಸ್‌ ಗಳಿಸಿರುವ ವಿರಾಟ್ ಅಗ್ರಸ್ಥಾನ ಹೊಂದಿದ್ದಾರೆ. ಇನ್ನು ಭಾರತ ಟೆಸ್ಟ್ ಸ್ಟಾರ್ ಚೇತೇಶ್ವರ್ ಪೂಜಾರ ಟಾಪ್ ೫ರಲ್ಲಿ ಸ್ಥಾನ ಪಡೆದುಕೊಂಡಿದ್ದು, ೩ನೇ ಸ್ಥಾನದಲ್ಲಿದ್ದಾರೆ.

ಇನ್ನು ಮತ್ತಿಬ್ಬರು ಆಟಗಾರರು ಟಾಪ್ 10 ಒಳಗೆ ಸ್ಥಾನ ಪಡೆದಿರುವುದು ಗಮನಾರ್ಹ ಸಂಗತಿ. ಬೌಲಿಂಗ್ ವಿಭಾಗದಲ್ಲಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಾಪ್ 10 ಒಳಗೆ ಸ್ಥಾನ ಪಡೆದುಕೊಂಡಿದ್ದಾರೆ.

ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್‌ನಲ್ಲಿ ನಂ. 1 ಸ್ಥಾನದಲ್ಲಿದ್ದ ಭಾರತ ಏಕದಿನದಲ್ಲಿ ಮೊದಲ ಸ್ಥಾನ ಬಿಟ್ಟು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.