News

ಉಡುಪಿ: ಕರಾವಳಿ ಜನರಿಗೆ ತಿಳುವಳಿಕೆ ಇಲ್ಲ: ಸಿಎಂ ಹೇಳಿಕೆಗೆ ವ್ಯಾಪಕ ಖಂಡನೆ

ಉಡುಪಿ, ಮಾ 19(SM): ಕರಾವಳಿ ಜನರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿರುವ ಸಿಎಂ ಕುಮಾರಸ್ವಾಮಿ ವಿರುದ್ಧ ಇದೀಗ ಕರಾವಳಿ ಜನತೆ ಆಕ್ರೋಶಿತರಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಬೇಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರಾವಳಿ ಜನರಿಗೆ ತಿಳುವಳಿಕೆ ಇಲ್ಲ. ಅವರು ಮೋದಿಗೆ ವೋಟ್ ಹಾಕುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರಾವಳಿಗೆ ನಿಮ್ಮ ಕೊಡುಗೆ ಏನು ಎಂದು ಮೊದಲು ಹೇಳಿ. ಉಡುಪಿ ಜನ ನಿಮ್ಮ ಮುಂದೆ ತಿರುಗಿ ಬಿದ್ದಿದ್ದಾರೆ. ನಿಮಗೆ ಮತ ಹಾಕಿಲ್ಲ ಅಂತ ಕರಾವಳಿ ಜನರ ಅವಹೇಳನ ಮಾಡುತ್ತಿದ್ದೀರಿ ಎಂದ ಅವರು, ನೀವು ನಿಮ್ಮ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.