News

ಮೇ 23ರ ಮತಗಳ ಎಣಿಕೆ ಕಾರ್ಯ ಮುಗಿದ ನಂತರ ಮೈತ್ರಿ ಸರ್ಕಾರ ಪತನಗೊಳ್ಳಲಿದೆ - ಯಡಿಯೂರಪ್ಪ

ಶಿವಮೊಗ್ಗ, ಎ23(Daijiworld News/SS): ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಇವರೆಲ್ಲ ಬಂಡಾಯ ಏಳಲಿದ್ದು, ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರತಿ ಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮತದಾನ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಮೈತ್ರಿ ಸರ್ಕಾರ ವಿರುದ್ಧ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಅಸಮಧಾನಗೊಂಡಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಇವರೆಲ್ಲ ಬಂಡಾಯ ಏಳಲಿದ್ದು, ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಮತದಾರರನ್ನು ಸೆಳೆಯಲು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ವ್ಯಾಪಕ ಹಣ ಹಂಚಿದ್ದರೂ, ಇದರಿಂದ ಗೆಲ್ಲಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ ನಿರಂತರ ತಮ್ಮ ಹಸ್ತಕ್ಷೇಪ, ಆಟಾಟೋಪಗಳಿಂದ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದು, ಮೇ 23ರ ಮತಗಳ ಎಣಿಕೆ ಕಾರ್ಯ ಮುಗಿದ ನಂತರ “ಕೈ” ಶಾಸಕರೇ ಸರ್ಕಾರವನ್ನು ಮುಳುಗಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.